ಮೈಸೂರು: ಸಾಲದ ಸುಳಿಯಲ್ಲಿ ಸಿಲುಕಿ ಯುವ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂತ ತಿಳಿದು ಬಂದಿದೆ. ಜು.19 ರಂದು ನಡೆದಿರೋ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಾಟಲಿಯಲ್ಲಿ ಪೆಟ್ರೋಲ್ ತಂದು ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ರೈತ ಶಿವಕುಮಾರ್( 35) ದುರ್ದೈವಿ. ಹೆಚ್ ಡಿ ಕೋಟೆ ತಾಲೂಕು ಕಣಿಯನಹುಂಡಿ ಗ್ರಾಮದ ಯುವ ರೈತ. ಕೃಷಿಗಾಗಿ ಕೈ ಸಾಲ ಮಾಡಿಕೊಂಡಿದ್ದ ರೈತ ಬೆಳೆ ಕೈ ಕೊಟ್ಟ ಹಿನ್ನಲೆಯಲ್ಲಿ ಸಾಲಭಾದೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಳ್ಳುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ. ಸರಸ್ವತಿ ಪುರಂ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
PublicNext
25/07/2026 10:49 pm
LOADING...