ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಹೂ ಕಳ್ಳತನ ಮಾಡಿ ಪರಾರಿಯಾಗುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ

ಚಿಕ್ಕಬಳ್ಳಾಪುರ: ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಲು ಸಿದ್ಧಪಡಿಸಿ ಇಟ್ಟಿದ್ದ ಹೂವುಗಳನ್ನು ಕಳವು ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬ ರೈತರ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಗುಂಡ್ಲಗುರ್ಕಿ ಗ್ರಾಮದಲ್ಲಿ ನಡೆದಿದೆ.

ಮಾಹಿತಿಯಂತೆ, ಆರೋಪಿ ಸುಮಾರು ಒಂದೂವರೆ ವರ್ಷಗಳಿಂದ ಪ್ರತಿನಿತ್ಯ ಒಂದಲ್ಲೊಂದು ತೋಟದಲ್ಲಿ ಹೂವು ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿದ್ದ ರೈತರು ಹೊಂಚು ಹಾಕಿ ಕಾದಿದ್ದು, ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಆರೋಪಿಯನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ನಲ್ಲಿಮರದಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಆರೋಪಿಯನ್ನು ಹಿಡಿದ ಬಳಿಕ ಗ್ರಾಮಸ್ಥರು ಗ್ರಾಮದಲ್ಲೇ ಕಟ್ಟಿಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By :
PublicNext

PublicNext

26/07/2026 09:25 am

Cinque Terre

9.32 K

Cinque Terre

0

ಸಂಬಂಧಿತ ಸುದ್ದಿ