ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಬರದ ನಾಡಿನಲ್ಲಿ ಮುಖ್ಯಮಂತ್ರಿ ಬರ ವೀಕ್ಷಣೆ; ವರದಿ ನೀಡಲು ಸೂಚನೆ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಕೈಕೊಟ್ಟಿದ್ದರೂ ರೈತರು ಮುಗಿಲಿನತ್ತಲೇ ಮುಖ ಮಾಡುತ್ತಿದ್ದಾರೆ. ಇಂಥ ಸಂಕಷ್ಟದಲ್ಲಿ ಬರದ ನಾಡಿನ ಅನ್ನದಾತರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧೈರ್ಯ ಹೇಳಲು ಮುಂದಾಗಿದ್ದಾರೆ.

ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿಎಂ ಡಿಕೆಶಿ, ಬಳಿಕ ರಸ್ತೆ ಮೂಲಕ ಯರಬಳ್ಳಿಯ ರೈತನ ಜಮೀನಿಗೆ ತೆರಳಿದರು. ಗ್ರಾಮದ ರೈತ ರಾಮಚಂದ್ರಪ್ಪ ಅವರಿಗೆ ಸೇರಿದ ಬಿತ್ತನೆ ಮಾಡದ ಖಾಲಿ ಜಮೀನು ವೀಕ್ಷಣೆ ಮಾಡಿದರು. ಅಲ್ಲಿಂದ ನೇರವಾಗಿ ವದ್ದಿಕೆರೆ ಐತಿಹಾಸಿಕ ಕಾಲಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಕೆ ಮಾಡಿದ್ರು. ನಂತ್ರ ಅಲ್ಲಿಂದ ಅದೇ ಗ್ರಾಮದ ರೈತ ಲಿಂಗಾರೆಡ್ಡಿ ಬೆಳೆದ ಸೂರ್ಯಕಾಂತಿ ಬೆಳೆ ವೀಕ್ಷಣೆ ಮಾಡಿದರು. ಮಳೆ ಇಲ್ಲದೇ ಬಾಡಿ ಹೋಗಿರುವ ಸೂರ್ಯಕಾಂತಿ ವೀಕ್ಷಣೆ ಮಾಡಿದ ಸಿಎಂ ಡಿಕೆಶಿ ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತ್ರ ಅಲ್ಲಿಂದ ನೇರವಾಗಿ ಚಿತ್ರದುರ್ಗ ನಗರದ ಮುರುಘಾ ಮಠಕ್ಕೆ ಭೇಟಿ ನೀಡಿದ ಅವರು, ಅಲ್ಲಿಂದ KDP ಸಭೆಗೆ ಆಗಮಿಸಿದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಸೇರಿ ಹಲವು ಶಾಸಕರು ಸಾಥ್ ನೀಡಿದರು.

ನಂತ್ರ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆದ 9 ಜಿಲ್ಲೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿಯಾದರು. ಈ ವೇಳೆ ಸಭೆಯಲ್ಲಿ ಬರ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಜಿರಾಮ್ ಜೀ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಜಿಲ್ಲೆಯ 8 ಕೆರೆಗಳ ಭರ್ತಿಗೆ ಮನವಿ ಸಲ್ಲಿಕೆ ಮಾಡಿದರು. 9 ಜಿಲ್ಲೆಗಳ ಶಾಸಕರು, ಸಂಸದರು, MLC ಗಳು, SP, DC, CEO ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಒಟ್ಟಾರೇ ಬರದ ನಾಡಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೌಂಡ್ಸ್ ಮಾಡಿದ್ದು, ಬರ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ಮುಂದೆ ಚಿತ್ರದುರ್ಗ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡ್ತಾರಾ? ಅಥವಾ ವಿಶೇಷ ಪ್ಯಾಕೇಜ್ ನೀಡ್ತಾರಾ ?ಅನ್ನೋದನ್ನ ಕಾದು ನೋಡ್ಬೇಕಿದೆ.

Edited By :
PublicNext

PublicNext

26/07/2026 11:12 am

Cinque Terre

6.43 K

Cinque Terre

0

ಸಂಬಂಧಿತ ಸುದ್ದಿ