ಬಾಗಲಕೋಟೆ:ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಕೇಂದ್ರ ಸರ್ಕಾರದ ಬೇಜವಾಬ್ದಾರಿ ಆಡಳಿತದಿಂದಾಗಿ ದೇಶದ ಸಾವಿರಾರು ವಿದ್ಯಾರ್ಥಿಗಳು ತೊಂದರೆ, ನೋವು ಹಾಗೂ ತೀವ್ರ ಮಾನಸಿಕ ಸಂಕಷ್ಟ ಅನುಭವಿಸುವಂತಾಯಿತು ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಈ ಪ್ರಕರಣದ ಪೂರ್ಣ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ನಿರಂತರವಾಗಿ ಒತ್ತಾಯಿಸುತ್ತಿದ್ದರು. ದೇಶಾದ್ಯಂತ ಉಪವಾಸ ಸತ್ಯಾಗ್ರಹ ಸೇರಿದಂತೆ ವಿವಿಧ ರೀತಿಯ ತೀವ್ರ ಪ್ರತಿಭಟನೆಗಳು ನಡೆದರೂ, ಸಚಿವರ ರಾಜೀನಾಮೆ ಪಡೆಯಲು ಕೇಂದ್ರ ಸರ್ಕಾರ ತಡಮಾಡಿತು ಎಂದು ಕಾಂಗ್ರೆಸ್ ನಾಯಕರು ಟೀಕಿಸಿದರು.
PublicNext
26/07/2026 11:37 am
LOADING...