ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ವಿವೇಕಾನಂದ ಸ್ಮಾರಕ ಉದ್ಘಾಟನೆ!

ಮೈಸೂರು:ಆಗಸ್ಟ್ 1ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 'ಸ್ವಾಮಿ ವಿವೇಕಾನಂದ ಸ್ಮಾರಕ'ವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇದರ ಜೊತೆಗೆ ರಾಮಕೃಷ್ಣ ಆಶ್ರಮದ ಅವರಣದಲ್ಲಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದರ ಭವ್ಯ ಪ್ರತಿಮೆಯನ್ನೂ ಅನಾವರಣಗೊಳಿಸಿ, ಬಳಿಕ ನಡೆಯಲಿರುವ ಸಭಾ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಅಲರ್ಟ್ ಆಗಿದ್ದು, ಭರದಿಂದ ಸಿದ್ಧತೆಗಳನ್ನು ನಡೆಸುತ್ತಿವೆ. ಪ್ರಧಾನಿಗಳ ಭೇಟಿಯ ವೇಳೆ ಯಾವುದೇ ರೀತಿಯ ಭದ್ರತಾ ಲೋಪ ಉಂಟಾಗದಂತೆ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

Edited By :
PublicNext

PublicNext

26/07/2026 11:48 am

Cinque Terre

7.15 K

Cinque Terre

0

ಸಂಬಂಧಿತ ಸುದ್ದಿ