ದಾವಣಗೆರೆ: ಜಿಲ್ಲೆಯ ದೇವನಗರಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ವಲಯ ಮಟ್ಟದ ಸಾಮೂಹಿಕ ಅಷ್ಟಲಕ್ಷ್ಮಿ ಪೂಜಾ ಕಾರ್ಯಕ್ರಮವು ಜುಲೈ 24ರಂದು ನಿಟ್ಟುವಳ್ಳಿಯ ಚೌಡೇಶ್ವರಿ ಸಮುದಾಯ ಭವನದಲ್ಲಿ ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮವು ಶ್ರೀ ಕ್ಷೇತ್ರ ಅವರಗೊಳ್ ಪುರವರ್ಗ ಹಿರೇಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಷ. ಬ್ರ. ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ ಶಾಮನೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಚ್.ಬಿ. ಮಂಜುನಾಥ್, ಲಕ್ಷ್ಮಣ್ ಎಂ., ಅಣಬೇರು ಮಂಜುನಾಥ್, ಹಾಲೇಶ್ ಹಾಗೂ ಡಿ.ಪಿ. ನಾಗರಾಜ್ ಉಪಸ್ಥಿತರಿದ್ದು ಶುಭಾಶಯ ಕೋರಿದರು.
ಸಾಮೂಹಿಕ ಅಷ್ಟಲಕ್ಷ್ಮಿ ಪೂಜೆಯಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಧಾರ್ಮಿಕ ಮತ್ತು ಆಧ್ಯಾತ್ಮಿಕ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
Kshetra Samachara
26/07/2026 05:48 pm
LOADING...