ನವದೆಹಲಿ: ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಕುಡಿಯುವ ನೀರು, ಜಲ ಸಂಪನ್ಮೂಲ ಯೋಜನೆಗಳ ಸ್ಥಿತಿಗತಿ, ರಾಜ್ಯದ ಜಲಾಶಯಗಳಲ್ಲಿನ ನೀರಿನ ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಜಲಸಂಪನ್ಮೂಲ ಅಧಿಕಾರಿಗಳಿಂದ ಮಾಹಿತಿ ಪಡೆದರು. ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಕರ್ನಾಟಕ ಜಲ ವಿವಾದಗಳ ಕುರಿತು ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳ ಬಳಿ ಮಾಹಿತಿ ಪಡೆದರು. ಸಂಸದರ ಸಭೆಗೂ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಕರ್ನಾಟಕ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಎಂ ಕಾರ್ಯದರ್ಶಿ ನಕುಲ್, ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
PublicNext
27/07/2026 04:14 pm
LOADING...