ವಿಜಯಪುರ: ನಗರದ ಬಿ.ಎಂ. ಪಾಟೀಲ ರಸ್ತೆಯ ಪ್ರಕೃತಿ ಕಾಲನಿಯಲ್ಲಿ ಸ್ಥಾಪಿಸಲಾದ ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ, ವಿಶೇಷ ಚೇತನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸೂಕ್ತ ಚಿಕಿತ್ಸೆ ಹಾಗೂ ಸಮಗ್ರ ಬೆಳವಣಿಗೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒಂದೇ ಸ್ಥಳದಲ್ಲಿ ಒದಗಿಸುವ ಮಹತ್ವಾಕಾಂಕ್ಷಿ ಉದ್ದೇಶದೊಂದಿಗೆ ಈ ಶಾಲೆಯನ್ನು ಆರಂಭಿಸಲಾಗಿದೆ. ಸಮಾಜದಲ್ಲಿ ವಿಶೇಷ ಮಕ್ಕಳಿಗೂ ಸಮಾನ ಅವಕಾಶಗಳು ದೊರೆಯಬೇಕು ಎಂದು ತಿಳಿಸಿದರು.
ಇನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
PublicNext
27/07/2026 05:46 pm
LOADING...