ಶಿರಹಟ್ಟಿ: ಸರ್ಕಾರಿ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಕರ್ಯದ ಕೊರತೆಯಾಗಬಾರದು ಎಂದು ಸರ್ಕಾರ ವಿವಿಧ ಇಲಾಖೆಗಳಿಂದ ಕೋಟ್ಯಂತರ ರೂ.ಗಳನ್ನು ನೀರಿನಂತೆ ಖರ್ಚು ಮಾಡುತ್ತದೆ. ಆದರೆ ಅದು ಅಧಿಕಾರಿಗಳ ನಿರ್ಲಕ್ಷದಿಂದಾಗಿ ಯಾವುದೇ ಪ್ರಯೋಜನವಾಗುತ್ತಿಲ್ಲ.
ವೀಕ್ಷಕರೇ, ನಾವು ಈಗ ಹೇಳುತ್ತಿರುವುದು ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿರುವ ಶ್ರೀ ಬನಶಂಕರಿ ದೇವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಗೋಳಾಗಿದೆ. ಈ ಕಾಲೇಜಿನ ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗೆ ದೂರದಲ್ಲಿರುವ ಪ್ರೌಢಶಾಲೆಗೆ ಹೋಗುತ್ತೇವೆ ಎಂದು ಹೇಳಿದರು.
ಈ ಕಾಲೇಜಿನಲ್ಲಿ 2020-21 ಸಾಲಿನಲ್ಲಿ ಜಿಲ್ಲಾ ಪಂಚಾಯತಿಯ ಅನುದಾನದಿಂದ ಹಾಗೂ 2021-22ರ ಗ್ರಾಮ ಪಂಚಾಯಿತಿ ನರೇಗಾ ಯೋಜನೆಯಡಿಯಲ್ಲಿ ಎರಡು ಶೌಚಾಲಯ ನಿರ್ಮಿಸಿದ್ದಾರೆ. ಅವುಗಳ ಸ್ಥಿತಿ ಹೇಗಿದೆ ಎಂದು ಒಮ್ಮೆ ನೀವೇ ನೋಡಿ.
ಆ ಶೌಚಾಲಯಗಳಿಗೆ ಡೋರ್ ಇಲ್ಲ, ನೀರಿನ ವ್ಯವಸ್ಥೆ ಇಲ್ಲ, ಸ್ವಚ್ಛತೆ ಇಲ್ಲ, ಸೆಪ್ಟಿಕ್ ಟ್ಯಾಂಕ್ ಇಲ್ಲ. ಅಲ್ಲದೆ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ಕಾಮಗಾರಿಯು ನಾಲ್ಕು ವರ್ಷಗಳಾದರೂ ಇನ್ನೂ ಪೂರ್ಣಗೊಂಡಿಲ್ಲ ಅನ್ನುವುದು ವಿಪರ್ಯಾಸದ ಸಂಗತಿಯಾಗಿದೆ.
ಇನ್ನಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಈ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸುತ್ತಾರಾ ಎಂದು ಕಾದು ನೋಡಬೇಕಿದೆ.
ಗೌರೀಶ ನಾಗಶೆಟ್ಟಿ, ಪಬ್ಲಿಕ್ ನೆಕ್ಸ್ಟ್ ಶಿರಹಟ್ಟಿ
PublicNext
27/07/2026 08:17 pm
LOADING...