ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರೀಕ್ಷಾ ವಿಚಾರದಲ್ಲಿ ಪ್ರಧಾನಿ ಮೋದಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ - ಶ್ರೀರಾಮುಲು

ಬಳ್ಳಾರಿ : ಮಕ್ಕಳ ಭವಿಷ್ಯಕ್ಕಾಗಿ ಮೋದಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ನೀಟ್ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಹೀಗಾಗಿ ಮೋದಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ನಂದನ್ ನಿಲೇಕಣಿ ಅವರು ಪರೀಕ್ಷಾ ಸುಧಾರಣೆಗಳ ಕುರಿತು ವಿಶೇಷ ಕಾರ್ಯಪಡೆಯನ್ನು ರಚಿಸಿದ್ದಾರೆ ಅಂತ ಮಾಜಿ ಸಚಿವ ಶ್ರೀರಾಮುಲು ಹೇಳಿದ್ರು.

ಬಳ್ಳಾರಿಯಲ್ಲಿ ಮಾತಾಡಿದ ಅವರು, ಪೇಪರ್ ಸೋರಿಕೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಎಲ್ಲರನ್ನೂ ಜೈಲಿಗೆ ಕಳುಹಿಸಲಾಗಿದೆ. ತ್ವರಿತ ನ್ಯಾಯಾಲಯ ರಚನೆಯಾಗಬೇಕು, ಮೂರು ತಿಂಗಳೊಳಗೆ ಪ್ರಕರಣ ಇತ್ಯರ್ಥವಾಗಬೇಕು. ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆ. ಹತ್ತು ವರ್ಷ ಜೈಲು ಶಿಕ್ಷೆ ಹಾಗೂ ಹತ್ತು ಕೋಟಿ ದಂಡ ವಿಧಿಸಲಾಗುತ್ತಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೋದಿ ವಿದ್ಯಾರ್ಥಿಗಳೊಂದಿಗೆ ಇದ್ದಾರೆ, ಮಕ್ಕಳ ಭಾವನೆಗೆ ಧಕ್ಕೆಯಾಗದ ನಿರ್ಧಾರ ಕೈಗೊಂಡಿದ್ದಾರೆ ಅಂತ ಶ್ರೀರಾಮುಲು ಹೇಳಿದ್ರು.

Edited By :
PublicNext

PublicNext

28/07/2026 11:35 am

Cinque Terre

9.32 K

Cinque Terre

0

ಸಂಬಂಧಿತ ಸುದ್ದಿ