ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 814 ಬಾಕಿ ಹುದ್ದೆಗಳ ಭರ್ತಿಗೆ ಒತ್ತಾಯ - NWKSRTC ಅಭ್ಯರ್ಥಿಗಳ ಪ್ರತಿಭಟನೆ..

ಹುಬ್ಬಳ್ಳಿ: ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC)ಯಲ್ಲಿ 2019ರ ನೇಮಕಾತಿ ಅಧಿಸೂಚನೆಯಡಿ ಬಾಕಿ ಉಳಿದಿರುವ 814 ಚಾಲಕ ಮತ್ತು ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ನೊಂದ ಅಭ್ಯರ್ಥಿಗಳು ಮಂಗಳವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಗೋಕುಲ ರಸ್ತೆಯ ಸಂತೆ ಮೈದಾನದಲ್ಲಿ ಜಮಾಯಿಸಿದ ಅಭ್ಯರ್ಥಿಗಳು, ಅಧಿಸೂಚನೆಯಡಿ ಒಟ್ಟು 1,814 ಹುದ್ದೆಗಳ ಪೈಕಿ 1,000 ಹುದ್ದೆಗಳಿಗೆ ಮಾತ್ರ ನೇಮಕಾತಿ ನಡೆದಿದ್ದು, ಉಳಿದ 814 ಹುದ್ದೆಗಳು ಇನ್ನೂ ಭರ್ತಿಯಾಗಿಲ್ಲ ಎಂದು ಆರೋಪಿಸಿದರು. ಬಾಕಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಗೆ NWKSRTC ಆಡಳಿತ ತಡೆಯಾಜ್ಞೆ ಪಡೆದಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದು, ಮೇಲ್ಮನವಿ ನ್ಯಾಯಾಲಯ ಪ್ರತಿಭಟನೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಉಳಿದ 814 ಹುದ್ದೆಗಳ ನೇಮಕಾತಿ ಶೀಘ್ರ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಸಂತೋಷ್, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/07/2026 01:30 pm

Cinque Terre

40.07 K

Cinque Terre

1

ಸಂಬಂಧಿತ ಸುದ್ದಿ