ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ಕಡಿತ ಹಿನ್ನೆಲೆ ರೈತರು ಕೆಂಡ!

ಬಾಗಲಕೋಟೆ: ರೈತರಿಗೆ ಏಳು ಗಂಟೆ ಕೊಡುತ್ತಿದ್ದ ವಿದ್ಯುತ್‌ನ್ನು 6 ಗಂಟೆಗೆ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ರೈತರು, ಬೀಳಗಿ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲಿನಂತೆ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಅಧಿಕಾರಿಗಳಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಕಚೇರಿ ಮುಂದೆ ಅಡುಗೆ ಮಾಡಿ ಅಹೋರಾತ್ರಿ ಹೋರಾಟ ಮುಂದುವರೆಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ಎಚ್ಚರಿಕೆ ನೀಡಿದ್ದಾರೆ.

Edited By : Somashekar
PublicNext

PublicNext

28/07/2026 09:57 pm

Cinque Terre

10.93 K

Cinque Terre

0

ಸಂಬಂಧಿತ ಸುದ್ದಿ