ಬೀದರ್: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ವೈದ್ಯರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಹನ್ನೊಂದು ವರ್ಷದ ಅನಾಥ ಬಾಲಕಿಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಡಾಶಯದಲ್ಲಿ ಬೆಳೆದಿದ್ದ ಭಾರೀ ಗಾತ್ರದ ಟ್ಯೂಮರ್‌ನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದು ಬಾಲಕಿಗೆ ಹೊಸ ಬದುಕು ನೀಡಿದ್ದಾರೆ. ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದ ಹನ್ನೊಂದು ವರ್ಷದ ಅನಾಥ ಬಾಲಕಿ ಕಳೆದ ಹಲವು ವರ್ಷಗಳಿಂದ ಅಂಡಾಶಯದ ಟ್ಯೂಮರ್‌ನಿಂದ ಬಳಲುತ್ತಿದ್ದು, ಆಗಾಗ ತೀವ್ರ ಹೊಟ್ಟೆನೋವಿನಿಂದ ಸಂಕಷ್ಟ ಅನುಭವಿಸುತ್ತಿದ್ದಳು. ಚಿಕಿತ್ಸೆಗಾಗಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾದ ಬಾಲಕಿಯನ್ನು ವೈದ್ಯರು ಪರೀಕ್ಷಿಸಿದಾಗ ಅಂಡಾಶಯದಲ್ಲಿ ದೊಡ್ಡ ಗಾತ್ರದ ಟ್ಯೂಮರ್ ಇರುವುದು ಪತ್ತೆಯಾಗಿದೆ. ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯೊಳಗೆ ಬೆಳೆದಿದ್ದ ಗಡ್ಡೆಯನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ನೀಡಿ ಜೀವ ಉಳಿಸಿದ ಬ್ರಿಮ್ಸ್ ವೈದ್ಯರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
28/07/2026 10:08 pm
LOADING...