ಮೈಸೂರು: ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ತಯಾರಿ ಜೋರಾಗಿ ನಡೆಯುತ್ತಿದೆ. ದಸರಾ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳು ನಡೆಯುವ ಚಾಮುಂಡಿ ವಿಹಾರ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅವರು ಪರಿಶೀಲಿಸಿದರು.
ಈ ಬಾರಿ ದಸರಾ ಕ್ರೀಡೆಯನ್ನು ಯಾವುದೇ ನ್ಯೂನತೆ ಉಂಟಾಗದಂತೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಕ್ರೀಡಾಂಗಣದಲ್ಲಿರುವ ದುರಸ್ತಿ ಕಾಮಗಾರಿಗಳಿದ್ದಲ್ಲಿ ಕೂಡಲೇ ಕೈಗೊಂಡು ಪೂರ್ಣಗೊಳಿಸಿ ಎಂದರು.
ಪರಿಶೀಲನೆಯ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ಉಪಸ್ಥಿತರಿದ್ದರು.
PublicNext
28/07/2026 10:44 pm
LOADING...