ಯಾದಗಿರಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು, ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ನಿರ್ಮಿಸಿರುವ ಬಸವಸಾಗರ ಜಲಾಶಯ ಭರ್ತಿಯಾಗಿದೆ. ಇದರಿಂದಾಗಿ 24 ಕ್ರಸ್ಟ್ ಗೇಟ್‌ಗಳ ಮುಖಾಂತರ 84 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದುಬರುತ್ತಿದೆ.
ನದಿಗೆ ನೀರು ಬಿಡುಗಡೆ ಮಾಡುತ್ತಿರುವ ಬಗ್ಗೆ ನದಿ ಪಾತ್ರದ ಗ್ರಾಮಗಳಿಗೆ ಎಚ್ಚರಿಕೆ ರವಾನಿಸಲಾಗಿದೆ. ಜಲಾಶಯಕ್ಕೆ 75 ಸಾವಿರ ಕ್ಯೂಸೆಕ್ ಒಳಹರಿವು ಬರುತ್ತಿದೆ. 33 ಟಿಎಮ್‌ಸಿ ಸಾಮರ್ಥ್ಯದ ಬಸವಸಾಗರ ಜಲಾಶಯ ಸದ್ಯ 33 ಟಿಎಮ್‌ಸಿಯಷ್ಟು ಭರ್ತಿಯಾಗಿದೆ.
PublicNext
29/07/2026 09:00 am
LOADING...