ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಇದೇ ಜುಲೈ 31 ಹಾಗೂ ಆಗಸ್ಟ್ 1 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 31 ರಂದು ಗದಗ ನಗರದ ಮೆಡಿಕಲ್ ಕಾಲೇಜು ಸೇರಿದಂತೆ ರೋಣ ತಾಲೂಕಿನ ವಿವಿಧೆಡೆ ಭೇಟಿ ನೀಡಲಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮಹಿಳಾ ಘಟಕವನ್ನು ಅವರು ಉದ್ಘಾಟಿಸಲಿದ್ದು, ಆಗಸ್ಟ್ 1 ನೇ ತಾರೀಖು ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳೆಯರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಮಹಿಳಾ ಸ್ಪಂದನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
PublicNext
29/07/2026 03:37 pm
LOADING...