ಚಿತ್ರದುರ್ಗ: ಮೇಟಿಕುರ್ಕೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, "ಚಿತ್ರದುರ್ಗ ಜಿಲ್ಲೆ ಶಾಶ್ವತ ಬರಪೀಡಿತ ಜಿಲ್ಲೆ. 3 ಲಕ್ಷಕ್ಕೂ ಅಧಿಕ ಹೆಕ್ಟೇರ್ ಬಿತ್ತನೆ ಮಾಡುವ ಜಿಲ್ಲೆಯಲ್ಲಿ ಪ್ರಸ್ತುತ 19% ಮಾತ್ರ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಅಧಿಕಾರಿಗಳಾಗಲಿ, ಸರ್ಕಾರವಾಗಲಿ ರೈತರ ಕಡೆ ತಿರುಗಿಯೂ ನೋಡಿಲ್ಲ. ಇನ್ಶೂರೆನ್ಸ್ (ವಿಮೆ) ಕುರಿತು ಸರಿಯಾದ ಪ್ರಚಾರ ಕೂಡ ಮಾಡಿಲ್ಲ. ಕೂಡಲೇ ರಾಜ್ಯ ಸರ್ಕಾರ ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು" ಎಂದು ಒತ್ತಾಯಿಸಿದರು.
PublicNext
29/07/2026 03:50 pm