ಕೋಲಾರ: ಮಾಜಿ ಸಚಿವ ದಿವಂಗತ ಸಿ. ಬೈರೇಗೌಡ ಅವರ ಪುಣ್ಯಸ್ಮರಣೆಯ ಅಂಗವಾಗಿ ಗರುಡಪಾಳ್ಯದಲ್ಲಿರುವ ಅವರ ಸಮಾಧಿಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮತ್ತು ಎಂಎಲ್‌ಸಿ ಎಂ. ಎಲ್. ಅನಿಲ್ ಕುಮಾರ್ ಅವರು ಭೇಟಿ ನೀಡಿ, ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂಜುನಾಥ್, "ಸಿ. ಬೈರೇಗೌಡ ಅವರು ಜನಪರ ನಾಯಕತ್ವ, ಸರಳತೆ ಹಾಗೂ ಅಭಿವೃದ್ಧಿಪರ ಚಿಂತನೆಯ ಮೂಲಕ ಜನಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು. ಅವರ ಆದರ್ಶಗಳು ಇಂದಿನ ಜನಪ್ರತಿನಿಧಿಗಳಿಗೆ ಮಾರ್ಗದರ್ಶಕವಾಗಿವೆ. ಅವರು ಹಾಕಿಕೊಟ್ಟ ಅಭಿವೃದ್ಧಿಯ ಹಾದಿಯಲ್ಲಿ ಸಾಗುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ" ಎಂದರು.
Kshetra Samachara
29/07/2026 04:44 pm