ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾವಳಗಿ–ತುಬಚಿ ರಸ್ತೆ ಕಳಪೆ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ

ಜಮಖಂಡಿ : ಸಾವಳಗಿ–ತುಬಚಿ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಕಳಪೆ ಮಟ್ಟದಲ್ಲಿ ನಿರ್ವಹಿಸಲಾಗಿದೆ ಎಂದು ಸಾರ್ವಜನಿಕರು ಗುತ್ತಿಗೆದಾರರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರಸ್ತೆ ಹಾಳಾಗಿದೆ. ಡಾಂಬರು ಕಿತ್ತು ಹೋಗಿ ಗುಂಡಿಗಳಾಗಿದ್ದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳೀಯರ ಆರೋಪದ ಪ್ರಕಾರ, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸದೇ, ನಿಯಮಾನುಸಾರ ಕೆಲಸ ಮಾಡದ ಕಾರಣ ರಸ್ತೆ ಹಾಳಾಗುತ್ತಿದೆ. ಇದರಿಂದ ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ರೈತರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರು ಆರೋಪ ಮಾಡುತ್ತಿದ್ದಾರೆ.

ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು. ರಸ್ತೆ ಕಾಮಗಾರಿಯ ಗುಣಮಟ್ಟವನ್ನು ತಾಂತ್ರಿಕ ತಂಡದಿಂದ ಪರಿಶೀಲಿಸಿ, ಗುತ್ತಿಗೆದಾರರ ವೆಚ್ಚದಲ್ಲಿಯೇ ರಸ್ತೆಯನ್ನು ಮರು ನಿರ್ಮಾಣ ಮಾಡಿಸಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಒತ್ತಾಯಿಸಿದ್ದಾರೆ.

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿ, ಸಾರ್ವಜನಿಕರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣವಾಗುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂಬುದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿದೆ.

Edited By : Manjunath H D
PublicNext

PublicNext

29/07/2026 05:02 pm

Cinque Terre

8.12 K

Cinque Terre

0

ಸಂಬಂಧಿತ ಸುದ್ದಿ