ಕೋಲಾರ: ಕಂದಾಯ ಮತ್ತು ಸರ್ವೆ ಇಲಾಖೆಗಳಲ್ಲಿ 2001 ರಿಂದ 2024ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ನಕಲಿ ಖಾತೆ ಸೃಷ್ಟಿ ಹಾಗೂ ಸರ್ಕಾರಿ ಕಡತಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಚುರುಕುಗೊಂಡಿದೆ.
ಈ ಬಹುಕೋಟಿ ಬೆಲೆಯ ಜಮೀನುಗಳ ನಕಲಿ ದಾಖಲೆ ದಂಧೆಯಲ್ಲಿ ಒಟ್ಟು 29 ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿರುವುದನ್ನು ಜಿಲ್ಲಾಡಳಿತ ಗುರುತಿಸಿದ್ದು, ಈ ಪೈಕಿ ಮೂವರನ್ನು ಅಮಾನತುಗೊಳಿಸಲಾಗಿದೆ. ಅಚ್ಚರಿಯೆಂದರೆ, ಪ್ರಕರಣದ ಮಾಹಿತಿ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ಕೋಲಾರ ಹಾಗೂ ಮಾಲೂರು ತಹಶೀಲ್ದಾರ್‌ಗಳ ವಿರುದ್ಧವೂ ಶಿಸ್ತುಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ತಮ್ಮ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಹಗರಣದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ಅವರು, ನಾನು ಖುದ್ದಾಗಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಪ್ರಕರಣದ (ದೂರು ಸಂಖ್ಯೆ: 724/2025, ARE-15)ಸಂಪೂರ್ಣ ತನಿಖಾ ವರದಿಯನ್ನು ಸಲ್ಲಿಸಿದ್ದೇನೆ" ಎಂದು ಸ್ಪಷ್ಟಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಡತಗಳ ನಾಪತ್ತೆ ಹಾಗೂ ನಕಲಿ ದಾಖಲೆ ಸೃಷ್ಟಿಯಾಗಿರುವ ಬಗ್ಗೆ ವರದಿ ನೀಡುವಂತೆ ಕೋಲಾರ ತಹಶೀಲ್ದಾರ್ ನಯನ ಹಾಗೂ ಮಾಲೂರು ತಹಶೀಲ್ದಾರ್ ರೂಪಾ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಇಬ್ಬರೂ ಅಧಿಕಾರಿಗಳು ನಿಗದಿತ ಸಮಯದೊಳಗೆ ವರದಿ ನೀಡದೆ ಕರ್ತವ್ಯಲೋಪವೆಸಗಿದ್ದಾರೆ. ಹೀಗಾಗಿ ಇವರಿಬ್ಬರ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ನೀಡಿದ್ದೇನೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
PublicNext
29/07/2026 05:46 pm
LOADING...