ಸಿದ್ದಾಪುರ: ಪಟ್ಟಣದ ರಾಘವೇಂದ್ರ ಮಠದಲ್ಲಿ ನಡೆದ ಸರಕಾರಿ ಪದವಿಪೂರ್ವ ಕಾಲೇಜು ಸಿದ್ದಾಪುರ ಇದರ ೨೦೨೬-೨೭ ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.
ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿದೆ. ವಿದ್ಯಾರ್ಥಿ ಸಂಸತ್ತು ನಾಯಕತ್ವದ ಗುಣ, ಶಿಸ್ತು ಹಾಗೂ ಜವಾಬ್ದಾರಿಯನ್ನು ಬೆಳೆಸುತ್ತದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮನಸ್ಸಿಗೆ ಮುದ ನೀಡುವುದರ ಜೊತೆಗೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿಯಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಲಭ್ಯವಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುರೇಂದ್ರ ದಪೇಧಾರ್, ಪ್ರಾಚಾರ್ಯ ಬಿ.ಎಸ್.ಹೆಗಡೆ, ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿ (CDC) ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
29/07/2026 06:55 pm
LOADING...