ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : 41ದಿನಗಳಲ್ಲಿ 3.37ಕೋಟಿ ಒಡೆಯ ನಾದ ಮಾದಪ್ಪ 

ಚಾಮರಾಜನಗರ : ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಗಡಿ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಮಾದಪ್ಪನ ಸನ್ನಿಧಿಯ ಹುಂಡಿಯಲ್ಲಿ ಸಂಗ್ರಹವಾದ ಹಣ ಎಣಿಕೆ ನಡೆದಿದ್ದು, ದಾಖಲೆಯ 3.37ಕೋಟಿ ರೂ.ಸಂಗ್ರಹವಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮಿ ಹಾಗೂ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯಪ್ರಾರಂಭ ಮಾಡಲಾಯಿತು.

ಕೇವಲ 41ದಿನಗಳಲ್ಲಿ 3,37,06,956ರೂ. ಸಂಗ್ರಹವಾಗಿದ್ದು, ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದಾರೆ. ಇಷ್ಟೇಅಲ್ಲದೇ 58ಗ್ರಾಂ ಚಿನ್ನ ಮತ್ತು 1ಕೆಜಿ250ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾರೆ.

ವಿಶೇಷ ದಿನಗಳು, ಅಮಾವಾಸ್ಯೆ ದಿನಗಳು, ಇತರೆ ರಜೆದಿನಗಳು ಹಾಗೂ ದೀಪದ ಒಡ್ಡುವಿನಲ್ಲಿ ನಿರ್ಮಾಣಗೊಂಡಿರುವ ಮಾದಪ್ಪನ ಬೃಹತ್ ಪ್ರತಿಮೆಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಅಲ್ಲದೆ ವಿದೇಶಿ ಭಕ್ತರು ಮಾದಪ್ಪನಿಗೆ ಹರಕೆಯ ರೂಪದಲ್ಲಿ ನಗದು ಮತ್ತು ಚಿನ್ನಾಭರಣಗಳನ್ನು ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

29/07/2026 06:58 pm

Cinque Terre

380

Cinque Terre

0

ಸಂಬಂಧಿತ ಸುದ್ದಿ