ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ರೈತರಿಗೆ ಮೇವಿನ ಕಿಟ್ ವಿತರಿಸಿ, ಮೇವು ಬೆಳೆಯಲು ಉತ್ತೇಜನ ನೀಡಿ : ಅಧಿಕಾರಿಗಳಿಗೆ ಡಿಸಿ ಸೂಚನೆ

ಚಿಕ್ಕಮಗಳೂರು: ಜಿಲ್ಲೆಯ ರೈತರಿಗೆ ಪಶುಪಾಲನಾ ಇಲಾಖೆಯಿಂದ ಮೇವಿನ ಕಿಟ್‌ಗಳನ್ನು ವಿತರಿಸಿ, ಗ್ರಾಮ ಮಟ್ಟದಲ್ಲಿ ಮೇವು ಬೆಳೆಯಲು ಉತ್ತೇಜನ ನೀಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೇವು ಅಭಿವೃದ್ಧಿ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದ್ಯ 28 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ ಎಂದು ತಿಳಿಸಿದರು. ಎಲ್ಲಾ 226 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುಸಖಿಯರ ಮೂಲಕ ರೈತರ ಬಳಿ ಲಭ್ಯವಿರುವ ಮೇವಿನ ಸಮೀಕ್ಷೆ ನಡೆಸುವಂತೆ ಸೂಚಿಸಿದರು. ಅಮೃತ್ ಮಹಲ್ ಕಾವಲು ಪ್ರದೇಶ ಸೇರಿದಂತೆ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಅಧೀನದಲ್ಲಿರುವ ಖಾಲಿ ಜಾಗಗಳಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಜೊತೆಗೆ, ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವ ಪರಿಸ್ಥಿತಿ ಎದುರಾದರೆ ಗೋಶಾಲೆ ಹಾಗೂ ಗೋಶಿಬಿರಗಳನ್ನು ತೆರೆಯಲು ಸೂಕ್ತ ಸ್ಥಳಗಳನ್ನು ಈಗಿನಿಂದಲೇ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

29/07/2026 10:33 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ