ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಅಕ್ರಮವಾಗಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ನಡೆಸುತ್ತಿದ್ದ ಜಾಲವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು 'ಡಿಕಾಯ್' ಕಾರ್ಯಾಚರಣೆಯ ಮೂಲಕ ಪತ್ತೆಹಚ್ಚಿದ್ದಾರೆ.
ಜಯಲಕ್ಷ್ಮಿ ಎಂಬ ಏಜೆಂಟ್ ₹35,000 ಪಡೆದು ಗರ್ಭಿಣಿಯರನ್ನು ಕರೆತರುತ್ತಿದ್ದ ಆರೋಪ ಕೇಳಿಬಂದಿದೆ. ಕಾರ್ಯಾಚರಣೆಯ ವೇಳೆ ಪ್ರಮುಖ ಆಡಿಯೋ ದಾಖಲೆಗಳು ಹಾಗೂ ಗರ್ಭಪಾತದ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಿಸಲಾಗುತ್ತಿದ್ದು, ಈ ಜಾಲದ ಹಿಂದೆ ಯಾವುದೇ ಆಸ್ಪತ್ರೆ, ನರ್ಸಿಂಗ್ ಹೋಮ್ ಅಥವಾ ವೈದ್ಯರ ಪಾತ್ರವಿದೆಯೇ ಎಂಬ ಬಗ್ಗೆ ಹಿಮ್ಮುಖ ತನಿಖೆ (Backward trace investigation) ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ (DHO) ಡಾ. ಬೆಟ್ಟಸ್ವಾಮಿ ತಿಳಿಸಿದ್ದಾರೆ. ಜೊತೆಗೆ, ಭ್ರೂಣ ಹತ್ಯೆಯ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಚಿಕ್ಕತೇಕಹಳ್ಳಿ ಡಿ. ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
30/07/2026 08:29 am
LOADING...