ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಕಾಡಾನೆ ದಾಳಿಯಲ್ಲಿ ಗಾಯಗೊಂಡ ಮಲ್ಲೇಶ್‌ಗೆ 60 ಸಾವಿರ ನೆರವು - ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ

ಸಕಲೇಶಪುರ: ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಗ್ರಾಮದ ನಿವಾಸಿ ಮಲ್ಲೇಶ್ ಅವರನ್ನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಲಾಯಿತು.

ಗಾಯಾಳುವಿನ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ₹60,000 ಮೊತ್ತದ ಚೆಕ್ ಅನ್ನು ಕುಟುಂಬ ಸದಸ್ಯರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಜನಪ್ರತಿನಿಧಿಗಳು, ಮಲ್ಲೇಶ್ ಅವರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾಡಾನೆ ಹಾವಳಿಯಿಂದ ಗ್ರಾಮೀಣ ಪ್ರದೇಶದ ರೈತರು ಹಾಗೂ ಸಾರ್ವಜನಿಕರು ಆತಂಕದಲ್ಲಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತ್ವರಿತ ಮತ್ತು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಒತ್ತಾಯವೂ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

30/07/2026 11:33 am

Cinque Terre

2.87 K

Cinque Terre

0

ಸಂಬಂಧಿತ ಸುದ್ದಿ