ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸವಣೂರು ತಹಶೀಲ್ದಾರ್ ಕಚೇರಿ ಆವರಣ ಈಗ 'ಕೆಸರು ಗದ್ದೆ': ಜಾರಿ ಬಿದ್ದು ಸಾರ್ವಜನಿಕರು, ಶಾಲಾ ಮಕ್ಕಳಿಗೆ ಗಾಯ!

ಸವಣೂರು: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣ ಸಂಪೂರ್ಣ ಅವ್ಯವಸ್ಥೆಯ ಗೂಡಾಗಿದ್ದು, ಕಚೇರಿಗೆ ಬರುವ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ.

ಆವರಣದ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಂತಾಗಿದ್ದು, ಸ್ವಲ್ಪ ಗಮನ ತಪ್ಪಿದರೂ ಬೆನ್ನುಮೂಳೆ ಮುರಿಯುವುದು ಖಚಿತ ಎನ್ನುವಂತಾಗಿದೆ. ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಆಗಮಿಸುವ ನೂರಾರು ಜನರು ಹಾಗೂ ಇದೇ ಆವರಣದಲ್ಲಿರುವ ಸರ್ಕಾರಿ ಶಾಲೆಗೆ ತೆರಳುವ ಪುಟ್ಟ ಮಕ್ಕಳು ಈ ರಾಡಿ ನೀರಿನಲ್ಲೇ ಜಾರಿ ಬಿದ್ದು ಗಾಯಗೊಂಡ ಉದಾಹರಣೆಗಳು ಹೆಚ್ಚಿವೆ.

ಇಷ್ಟೆಲ್ಲಾ ಅವಾಂತರಗಳು ಸಂಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಮೌನಕ್ಕೆ ಶರಣಾಗಿದ್ದಾರೆ. ಅಧಿಕಾರಿಗಳ ಈ ಉಡಾಫೆ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಿಡಿಶಾಪ ಹಾಕುತ್ತಿದ್ದಾರೆ.

ಸಾರ್ವಜನಿಕರ ಒತ್ತಾಯ:

ಇನ್ನಾದರೂ ಸಂಬಂಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕ್ಷೇತ್ರದ ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ತಕ್ಷಣವೇ ಕಚೇರಿ ಆವರಣದ ರಸ್ತೆಯನ್ನು ದುರಸ್ತಿಗೊಳಿಸಿ, ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ: ರಮೇಶ್ ಸೋಮಕ್ಕನವರ, ಪಬ್ಲಿಕ್ ನೆಕ್ಸ್ಟ್

Edited By : Somashekar
PublicNext

PublicNext

30/07/2026 04:26 pm

Cinque Terre

8.61 K

Cinque Terre

1

ಸಂಬಂಧಿತ ಸುದ್ದಿ