ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಬೆಳಗ್ಗೆ ಉಪಾಹಾರ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ! ಆಸ್ಪತ್ರೆಗೆ ದಾಖಲು

ಕಲಬುರಗಿ: ಬೆಳಗಿನ ಉಪಾಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಅಫಜಲಪುರ ತಾಲ್ಲೂಕಿನ ಕರಜಿಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಅಸ್ವಸ್ಥಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ‌ ಚಿಕಿತ್ಸೆ ನೀಡಿ ನಂತರ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಇಬ್ಬರು ಮಕ್ಕಳನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸವರಾಜ್ ಹಾಗೂ ಕಾರ್ತಿಕ್ ಅವರಿಗೆ ಹೊಟ್ಟೆ ಉರಿ ಜಾಸ್ತಿಯಾಗಿದ್ದರಿಂದ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಉಪಾಹಾರದಲ್ಲಿ ಅವಲಕ್ಕಿ ತಿಂದಿದ್ದು, ನಂತರ ತಲೆ ಹಾಗೂ ಮೈ ಕೈ ನೋವು ಕಾಣಿಸಿಕೊಂಡಿದೆ. ಈ ಘಟನೆ ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Edited By : Manjunath H D
PublicNext

PublicNext

30/07/2026 04:36 pm

Cinque Terre

7.17 K

Cinque Terre

0

ಸಂಬಂಧಿತ ಸುದ್ದಿ