ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ - ಗರಗ ಗ್ರಾಮದ ಯೋಧ ವಸಂತರೆಡ್ಡಿ ಸಾವು

ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ಯೋಧರೊಬ್ಬರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದ ವಸಂತರೆಡ್ಡಿ ಕೆಂಡರೆಡ್ಡಿ (45) ಎಂಬ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದವರಾಗಿದ್ದಾರೆ.

18ನೇ ಮೆಕನೈಸ್ಡ್ ಇನ್ಫಾಂಟ್ರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತರೆಡ್ಡಿ ಅವರು ಸದ್ಯ ರಾಜಸ್ಥಾನದ ಬಾರ್ಮರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 24 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತರೆಡ್ಡಿ ಅವರಿಗೆ ಬುಧವಾರ ಏಕಾಏಕಿ ಹೃದಯಾಘಾತವಾಗಿದೆ.

ಅವರ ಪಾರ್ಥಿವ ಶರೀರವು ಗುರುವಾರ ಸಂಜೆ 6 ಗಂಟೆಗೆ ಗರಗ ಗ್ರಾಮಕ್ಕೆ ಬರಲಿದೆ. ವಿಮಾನದ ಮೂಲಕ ಗೋವಾಕ್ಕೆ ಪಾರ್ಥಿವ ಶರೀರವನ್ನು ತಂದು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸ್ವಗ್ರಾಮಕ್ಕೆ ತರಲಾಗುತ್ತದೆ. ಶುಕ್ರವಾರ ಯೋಧನ ಅಂತ್ಯಕ್ರಿಯೆಯು ಭಾರತೀಯ ಸೇನೆಯ ರೀತಿ-ನಿಯಮಗಳಂತೆ ನಡೆಯಲಿದೆ.

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತವಾಗಿ ಸಾವಿಗೀಡಾದ ಯೋಧನ ಗರಗ ಗ್ರಾಮದ ಮನೆಗೆ ಮಾಜಿ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/07/2026 04:49 pm

Cinque Terre

41.49 K

Cinque Terre

10

ಸಂಬಂಧಿತ ಸುದ್ದಿ