ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಜಿಲ್ಲೆಯಲ್ಲಿ ಶೇ.86 ರಷ್ಟು ಪೂರ್ಣಗೊಂಡ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - ಜಿಲ್ಲಾಧಿಕಾರಿ ಸೋಮಶೇಖರ್

ಮಡಿಕೇರಿ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಡಿಜಿಟಲೀಕರಣವು ಜಿಲ್ಲೆಯಲ್ಲಿ ಶೇ.86 ರಷ್ಟು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಶ್ವತವಾಗಿ ಸ್ಥಳಾಂತರಗೊಂಡ, ಎರಡು ಕಡೆ ಹೆಸರು ಹೊಂದಿರುವ ಹಾಗೂ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದೆ (ASDDIO) ಇರುವ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ಹಸ್ತಾಂತರಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 4,68,657 ಮತದಾರರಿಗೂ SIR ನಮೂನೆ ವಿತರಿಸಲಾಗಿದ್ದು, ಈ ಪೈಕಿ 4,03,576 ನಮೂನೆಗಳನ್ನು ಡಿಜಿಟಲೀಕರಣಗೊಳಿಸಿ ಶೇ.86 ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದೆ. ಈ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು ತಮ್ಮ ಹಂತದಲ್ಲಿ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಮರಣ, ಸ್ಥಳಾಂತರ, ಗೈರು ಅಥವಾ ಎರಡು ಕಡೆ ಹೆಸರು ಹೊಂದಿರುವ ಹಾಗೂ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದೇ ಇರುವ 65,018 ಮತದಾರರಿದ್ದು, ಈ ಕುರಿತೂ ಸಹ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.

SIR ಪ್ರಕ್ರಿಯೆಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಮಾಹಿತಿ ನೀಡಬೇಕು. ಯಾರ ಹೆಸರೂ ಸಹ ಈ ಪ್ರಕ್ರಿಯೆಯಿಂದ ಹೊರಗುಳಿಯಬಾರದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯೂ ಹೆಚ್ಚಿನದ್ದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Edited By : PublicNext Desk
PublicNext

PublicNext

30/07/2026 05:20 pm

Cinque Terre

3.19 K

Cinque Terre

0

ಸಂಬಂಧಿತ ಸುದ್ದಿ