ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

ಮಡಿಕೇರಿ : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ಎಂ.ಜಿ. ಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು.

ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೇ ಮಾಹೆಯಲ್ಲಿ 1,05,392 ಫಲಾನುಭವಿಗಳಿಗೆ ಒಟ್ಟು ₹2,10,78,400 ಹಣ ಬಿಡುಗಡೆಯಾಗಿದೆ. ಇದೇ ವೇಳೆ, ಗೃಹಲಕ್ಷ್ಮಿ ಯೋಜನೆಯಡಿ ಮರಣಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಧನಸಹಾಯದ ಮೊತ್ತವನ್ನು ಬ್ಯಾಂಕ್ ಖಾತೆಯಿಂದ ಮತ್ತೆ ಸರ್ಕಾರದ ಖಾತೆಗೆ ಜಮೆ ಮಾಡುವ ಕುರಿತು ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 10.07.2026 ರಂದು BLBC ಸಭೆ ಏರ್ಪಡಿಸಲಾಗಿತ್ತು.

ಸಭೆಯಲ್ಲಿ ಮಡಿಕೇರಿ ತಾಲೂಕಿನಲ್ಲಿ ಒಟ್ಟು 711 ಗೃಹಲಕ್ಷ್ಮಿ ಫಲಾನುಭವಿಗಳು ಮರಣಹೊಂದಿರುವ ಮಾಹಿತಿ ಲಭ್ಯವಾಗಿದೆ. ಲೀಡ್ ಬ್ಯಾಂಕ್ ಮ್ಯಾನೇಜರ್ ಅವರು ಪ್ರತಿ ಮರಣಹೊಂದಿದ ಫಲಾನುಭವಿಯ ಬ್ಯಾಂಕ್ ಖಾತೆಯ IFSC ಕೋಡ್ ನೀಡುವಂತೆ ತಿಳಿಸಿದ್ದಾರೆ.

ಅದರಂತೆ ಆಹಾರ ಶಾಖೆಯವರಿಗೆ ಪತ್ರದ ಮುಖೇನ ಗ್ರಾಮವಾರು ಮಾಹಿತಿ ಕೇಳಲಾಗಿದ್ದು, ಮಾಹಿತಿ ಪಡೆದ ನಂತರ IFSC ಕೋಡ್ ವಿವರಗಳನ್ನು ಕಲೆಹಾಕಿ ಲೀಡ್ ಬ್ಯಾಂಕ್‌ಗೆ ಮುಂದಿನ ಕ್ರಮಕ್ಕಾಗಿ ನೀಡಲಾಗುವುದು. ಹಾಗೂ ಮಡಿಕೇರಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತಿಗಳಿಂದ ಮರಣ ಪ್ರಮಾಣಪತ್ರ ವಿತರಿಸುವ ಬಗ್ಗೆ ಪ್ರತಿ ತಿಂಗಳು ಮಾಹಿತಿ ಪಡೆದು ಪರಿಶೀಲಿಸಲಾಗುತ್ತಿದೆ.

ಗೃಹಲಕ್ಷ್ಮಿ ಫಲಾನುಭವಿ ಮರಣಹೊಂದಿದ್ದರೆ ಅವರ ಮರಣ ಪ್ರಮಾಣಪತ್ರ, ಆಧಾರ್ ಕಾರ್ಡ್ ಪಡೆದುಕೊಂಡು ಬ್ಯಾಂಕ್ ಖಾತೆಗೆ ಹಣ ಜಮೆಯಾಗುವುದನ್ನು ತಡೆಹಿಡಿಯಲಾಗುವುದು. ಅಲ್ಲದೆ, ಈ ಕುಟುಂಬದಲ್ಲಿ ಇತರ ಅರ್ಹ ಮಹಿಳಾ ಸದಸ್ಯರಿದ್ದಲ್ಲಿ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಅದರಂತೆ ಗೂಗಲ್ ಶೀಟ್ ರಚಿಸಿ ಪ್ರತಿ ಗ್ರಾಮ ಪಂಚಾಯತಿಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

Edited By : PublicNext Desk
PublicNext

PublicNext

30/07/2026 05:20 pm

Cinque Terre

3.42 K

Cinque Terre

0

ಸಂಬಂಧಿತ ಸುದ್ದಿ