ಮಡಿಕೇರಿ : ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಡಿಕೇರಿ, ಕೊಡಗು ಜಿಲ್ಲೆ ವತಿಯಿಂದ ಪ್ರತಿ ವರ್ಷವೂ ವಿದ್ಯಾರ್ಥಿಗಳಲ್ಲಿ ತಂಬಾಕಿನ ಉತ್ಪನ್ನಗಳ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯಿದೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವಲ್ಲಿ ಮತ್ತು ಶಾಲಾ ಅರಿವು ಕಾರ್ಯಕ್ರಮಗಳು, ಕೋಟ್ಪಾ ತನಿಖಾ ದಾಳಿಗಳು, ಬೀದಿನಾಟಕ, ವಿಶ್ವ ತಂಬಾಕು ರಹಿತ ದಿನಾಚರಣೆ, ತಂಬಾಕು ಮುಕ್ತ ಯುವ ಅಭಿಯಾನ, ಗುಂಪು ಚರ್ಚೆ, ಆಪ್ತ ಸಮಾಲೋಚನೆ, ಇನ್ನಿತರ IEC ಚಟುವಟಿಕೆಗಳು ಮತ್ತು ತರಬೇತಿ ಕಾರ್ಯಾಗಾರಗಳು ಜಿಲ್ಲೆಯಾದ್ಯಂತ ನಡೆಯುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ತಿಳಿಸಿದ್ದಾರೆ.
2026-27ನೇ ಸಾಲಿನಲ್ಲಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೋಟ್ಪಾ ತನಿಖಾ ದಾಳಿಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದುವ ಯಾವುದೇ ವ್ಯಕ್ತಿಗೆ ಪ್ರತಿ ಉಲ್ಲಂಘನೆಗೆ ₹1,000 ರವರೆಗೆ ಸೆಕ್ಷನ್ 21 ರ ಪ್ರಕಾರ ಪ್ರಾಧಿಕೃತ ಅಧಿಕಾರಿಗಳು ಸ್ಥಳದಲ್ಲೇ ದಂಡವನ್ನು ವಿಧಿಸಬಹುದು ಅಥವಾ ದಂಡ ಕಟ್ಟಲು ನಿರಾಕರಿಸಿದಲ್ಲಿ ಕೋರ್ಟ್ ಮುಂದೆ ಹಾಜರಾಗುವಂತೆ ಚಲನ್ ನೀಡಬಹುದಾಗಿದೆ.
2026 ನೇ ಏಪ್ರಿಲ್–ಜೂನ್ ಅವಧಿಯಲ್ಲಿ 34 ದಾಳಿಗಳನ್ನು ನಡೆಸಿ 360 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿ ಅರಿವು ಮೂಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೆಕ್ಷನ್-5: ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ತೇಜನ, ಪ್ರಾಯೋಜಕತೆಯ ಮೇಲೆ ನಿಷೇಧ ಹೇರಲಾಗಿದ್ದು, ಉಲ್ಲಂಘನೆಯಾದಲ್ಲಿ ದಂಡ ಮತ್ತು ಜೈಲು ಶಿಕ್ಷೆಯ ಕುರಿತು ಜಾಗೃತಿ ಮೂಡಿಸಲಾಗಿದೆ.
PublicNext
30/07/2026 05:46 pm
LOADING...