ಯಾದಗಿರಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಯಾದಗಿರಿಯಲ್ಲೂ ಕನ್ನಡಪರ ಹೋರಾಟಗಾರರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಖಾಲಿ ಕೊಡ ಹಾಗೂ ಪೊರಕೆಗಳನ್ನು ಹಿಡಿದು ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿದರು. "ನಮ್ಮ ರಾಜ್ಯದಲ್ಲೇ ಭೀಕರ ಬರಗಾಲದ ಛಾಯೆ ಆವರಿಸಿದೆ. ನಮಗೇ ಕುಡಿಯಲು ನೀರಿಲ್ಲ, ನಮಗೆ ನೀರಿನ ತುರ್ತು ಅವಶ್ಯಕತೆ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು" ಎಂದು ಆಗ್ರಹಿಸಿದರು.
"ಒಂದು ವೇಳೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಮಿಳುನಾಡಿಗೆ ನೀರು ಹರಿಸಿದರೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ರೂಪಿಸಲಾಗುವುದು" ಎಂದು ಎಚ್ಚರಿಸಿದರು.
PublicNext
30/07/2026 06:39 pm
LOADING...