ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು: ಆರಗ ಜ್ಞಾನೇಂದ್ರ

ಶಿವಮೊಗ್ಗ: ಕರ್ನಾಟಕ ರಾಜ್ಯದಲ್ಲಿ ವಾಡಿಕೆ ಮಳೆಯಾಗದೆ ಶೇಕಡಾ 50ಕ್ಕೂ ಹೆಚ್ಚು ಪ್ರದೇಶಗಳು ತೀವ್ರ ಬರಪೀಡಿತವಾಗಿವೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ, ಜಾನುವಾರುಗಳಿಗೆ ಮೇವಿನ ಕೊರತೆಯಿಂದ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ರೈತರ ಬದುಕು ಅಯೋಮಯವಾಗಿರುವ ಈ ಸನ್ನಿವೇಶದಲ್ಲಿ, ಕೇವಲ ಕಚೇರಿಗಳಲ್ಲಿ ಕುಳಿತು ಹೇಳಿಕೆಗಳನ್ನು ನೀಡುವ ಬದಲು ಪ್ರಮುಖ ವಿರೋಧ ಪಕ್ಷವಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, "ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿ, ಸ್ಥಳದಲ್ಲೇ ರೈತರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಲು ಬಿಜೆಪಿಯಿಂದ ಒಟ್ಟು 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ನಿನ್ನೆಯಿಂದಲೇ ರಾಜ್ಯಾದ್ಯಂತ ಬರ ಅಧ್ಯಯನ ಪ್ರವಾಸವನ್ನು ಆರಂಭಿಸಿವೆ. ನಿನ್ನೆ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ವೀಕ್ಷಣೆ ನಡೆಸಲಾಗಿದ್ದು, ಇಂದು ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರವಾಸ ಕೈಗೊಂಡು ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ. ಈ ಎಲ್ಲಾ ವಾಸ್ತವ ವರದಿಗಳನ್ನು ಕಲೆಹಾಕಿ ಶೀಘ್ರದಲ್ಲೇ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಲಾಗುವುದು" ಎಂದರು.

Edited By : Manjunath H D
PublicNext

PublicNext

30/07/2026 06:55 pm

Cinque Terre

9.18 K

Cinque Terre

0

ಸಂಬಂಧಿತ ಸುದ್ದಿ