ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾವೇರಿ ತವರಿನಲ್ಲಿ ಕಾವೇರಿ ಕಿಚ್ಚು..! ತಮಿಳುನಾಡಿಗೆ ನೀರು ಹರಿಸದಂತೆ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ"

ಕುಶಾಲನಗರ : ಕಾವೇರಿ ತವರೂರು ಕೊಡಗಿನಲ್ಲಿ ಕಾವೇರಿ ಹೋರಾಟದ ಕಿಚ್ಚು ಭುಗಿಲೆದ್ದಿದೆ. ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿರೋಧಿಸಿ ಕುಶಾಲನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಬಿ.ಎನ್. ದಿನೇಶ್ ಶೆಟ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ ಹಾಗೂ ಬರದಂತಹ ಪರಿಸ್ಥಿತಿ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ವಾದಿಸಿದರು. ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರಾಜ್ಯದ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು. ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನೀರು ಬಿಡುಗಡೆ ಮಾಡುವ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಪ್ರತಿಭಟನೆಯ ವೇಳೆ ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರವೇ ಮುಖಂಡರು ಎಚ್ಚರಿಕೆ ನೀಡಿದರು.

Edited By : PublicNext Desk
Kshetra Samachara

Kshetra Samachara

31/07/2026 06:44 am

Cinque Terre

700

Cinque Terre

0

ಸಂಬಂಧಿತ ಸುದ್ದಿ