ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಭತ್ತದ ಗದ್ದೆಗೆ ಕಾಡಾನೆ ದಾಳಿ - ಭತ್ತದ ಸಸಿಮಡಿ ನಾಶ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ತೀವ್ರಗೊಂಡಿದೆ. ಮಡಿಕೇರಿ ತಾಲ್ಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಭತ್ತದ ಗದ್ದೆಗೆ ನುಗ್ಗಿ ಭತ್ತದ ಸಸಿಮಡಿ ಸೇರಿದಂತೆ ಕಾಫಿ, ಅಡಿಕೆ ಹಾಗೂ ಬಾಳೆ ಬೆಳೆಗಳನ್ನು ನಾಶಪಡಿಸಿದೆ.

ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮದಲ್ಲಿರುವ ಕಾವೇರಿ ಮನೆ ಭರತ್ ಅವರಿಗೆ ಸೇರಿದ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು, ಭತ್ತದ ಸಸಿಮಡಿಯನ್ನು ತುಳಿದು ಹಾನಿಗೊಳಿಸಿದೆ. ಜೊತೆಗೆ ಕಾಫಿ, ಅಡಿಕೆ ಹಾಗೂ ಬಾಳೆ ಬೆಳೆಗಳಿಗೂ ಹಾನಿಯಾಗಿದೆ. ಕಳೆದ ಹಲವು ದಿನಗಳಿಂದ ಅಯ್ಯಂಗೇರಿ ಗ್ರಾಮದ ಸುತ್ತಮುತ್ತ ಕಾಡಾನೆಗಳ ನಿರಂತರ ಉಪಟಳದಿಂದ ರೈತರು ಬೆಳೆ ನಾಶಪಡಿಸುತ್ತಿದ್ದು ರೈತರು ಕಂಗಲಾಗಿದ್ದಾರೆ. ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳನ್ನು ಕಾಡಿಗೆ ಓಡಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Edited By : PublicNext Desk
PublicNext

PublicNext

31/07/2026 06:49 am

Cinque Terre

2.78 K

Cinque Terre

0

ಸಂಬಂಧಿತ ಸುದ್ದಿ