ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ರಾಜೇಶ್ವರಿ (26) ಹಾಗೂ ಅವರ ಏಳು ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ. ಪತಿ ಹೊನ್ನೂರುಸ್ವಾಮಿ ಎಂಬಾತನೇ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮತ್ತು ಮಗುವಿನ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿಷಯ ತಿಳಿದು ಎಪಿಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ವೀರೇಶ್ ನಾಯಕ ಎಲ್, ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ
PublicNext
31/07/2026 08:56 am
LOADING...