ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಮಾದಕವಸ್ತುಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವಂತೆ ವಿದ್ಯಾರ್ಥಿಗಳಿಗೆ ಕರೆ

ಹಾಸನ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಅರಸೀಕೆರೆ ಯೋಜನಾ ಕಚೇರಿ ವತಿಯಿಂದ ಅರಸೀಕೆರೆಯ ಗಂಡಸಿಯಲ್ಲಿ ಜುಲೈ 30ರಂದು ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ವಿದ್ಯಾರ್ಥಿಗಳು ಮಾದಕ ವಸ್ತುಗಳಾದ ಸಿಗರೇಟ್, ಬೀಡಿ, ತಂಬಾಕು, ಮದ್ಯಪಾನ ಹಾಗೂ ಡ್ರಗ್ಸ್ ಸೇವನೆಯಿಂದ ದೇಹ ಮತ್ತು ಮನಸ್ಸಿನ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇಂತಹ ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಅಕ್ಷತಾ ರೈ, ಮಾನವ ಸಂಪನ್ಮೂಲ ಅಧಿಕಾರಿ ಸುಬ್ರಹ್ಮಣ್ಯ, ಪ್ರಾಂಶುಪಾಲ ಚಂದ್ರಶೇಖರ್ ಹಾಗೂ ವಲಯ ಮೇಲ್ವಿಚಾರಕ ಸೀತಾರಾಮ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಭಾಗವಹಿಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ಪಡೆದು ಜಾಗೃತಿ ಹೊಂದಿದರು.

Edited By : Vijay Kumar
Kshetra Samachara

Kshetra Samachara

31/07/2026 10:40 am

Cinque Terre

20 K

Cinque Terre

0

ಸಂಬಂಧಿತ ಸುದ್ದಿ