ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಡಾನೆ ಹಾನಿ ಪ್ರದೇಶಕ್ಕೆ ಅರಣ್ಯಾಧಿಕಾರಿಗಳ ಭೇಟಿ : ಗ್ರಾಮಸ್ಥರಿಗೆ ಎಚ್ಚರಿಕೆ

ಸಕಲೇಶಪುರ: ಕಾಡಾನೆಗಳ ಹಾವಳಿಯಿಂದ ಹಾನಿಗೊಳಗಾಗಿರುವ ಅಚ್ಚನಹಳ್ಳಿ ಗ್ರಾಮದ ಅರುಣ್ ಬಿನ್ ಸೋಮೇಶ್ ಹಾಗೂ ಇತರ ರೈತರ ಜಮೀನುಗಳಿಗೆ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾನಿಗೊಳಗಾದ ಬೆಳೆ ಪ್ರದೇಶಗಳನ್ನು ವೀಕ್ಷಿಸಿದ ಅಧಿಕಾರಿಗಳು, ರೈತರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ಕಾಡಾನೆ ಹಾವಳಿ ತಡೆಗೆ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಬಳಿಕ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು, ಪ್ರಸ್ತುತ 'ಭೀಮ' ಮತ್ತು 'ಕ್ಯಾಪ್ಟನ್' ಎಂದು ಗುರುತಿಸಲ್ಪಟ್ಟಿರುವ ಒಂಟಿ ಕಾಡಾನೆಗಳು ಸಂಚರಿಸುತ್ತಿರುವ ಕಿರುಹುಣಸೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರು ಹಾಗೂ ಕಾಫಿ ತೋಟದ ಕಾರ್ಮಿಕರಿಗೆ ಜಾಗೃತಿ ಮೂಡಿಸಿದರು.

ಕಾಡಾನೆಗಳ ಚಲನವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿದ ಅವರು, ಕಾಫಿ ತೋಟಗಳಿಗೆ ತೆರಳುವ ಮುನ್ನ ಅರಣ್ಯ ಇಲಾಖೆಯಿಂದ ಕಾಡಾನೆಗಳ ಪ್ರಸ್ತುತ ಇರುವಿಕೆಯ ಕುರಿತು ಮಾಹಿತಿ ಪಡೆದು, ಗುಂಪುಗಳಲ್ಲಿ ತೆರಳುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಚ್ಚರಿಕೆಯಿಂದ ವರ್ತಿಸಬೇಕು ಹಾಗೂ ಯಾವುದೇ ತುರ್ತು ಪರಿಸ್ಥಿತಿ ಕಂಡುಬಂದಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.

Edited By : Nirmala Aralikatti
Kshetra Samachara

Kshetra Samachara

31/07/2026 12:41 pm

Cinque Terre

3.56 K

Cinque Terre

0

ಸಂಬಂಧಿತ ಸುದ್ದಿ