ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಕಾನ್‍ಸ್ಟೆಬಲ್ ಪರೀಕ್ಷೆಗೆ ಶೂ, ಲೋಹದ ಆಭರಣ ನಿಷೇಧ

ಕೋಲಾರ - ಜಿಲ್ಲೆಯಲ್ಲಿ ಆ.2‌ರಂದು ನಡೆಯಲಿರುವ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು‌ ಶೂ ಧರಿಸುವುದನ್ನು ನಿಷೇಧಿಸಲಾಗಿದೆ.

ಸಾಮಾನ್ಯ ಚಪ್ಪಲಿ ಧರಿಸಲು ಮಾತ್ರ ಅವಕಾಶವಿದ್ದು, ಮಂಗಳಸೂತ್ರ ಮತ್ತು ಮೂಗುತಿ ಹೊರತುಪಡಿಸಿ ಬೇರೆ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಪೂರ್ಣ ತೋಳಿನ ಶರ್ಟ್ ಧರಿಸುವಂತಿಲ್ಲ. ಮುಖ, ಕಿವಿ ಅಥವಾ ತಲೆ ಮುಚ್ಚುವಂತಹ ಉಡುಪು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

31/07/2026 01:07 pm

Cinque Terre

760

Cinque Terre

0

ಸಂಬಂಧಿತ ಸುದ್ದಿ