ಬೆಂಗಳೂರು: ರಾಜ್ಯದ ಪಶುವೈದ್ಯರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಜೆಡಿಎಸ್ ಶಾಸಕ ಎ. ಮಂಜು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಸಚಿವರಾಗಿದ್ದ ಕಾಲವನ್ನು ನೆನಪಿಸಿಕೊಂಡ ಅವರು, ಅಂದು ಪಶು ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದೆ ರೈತರು ಪಡುತ್ತಿದ್ದ ಕಷ್ಟವನ್ನು ಕಣ್ಣಾರೆ ಕಂಡು ಸುಮಾರು 650 ಪಶುವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿದ್ದಾಗಿ ತಿಳಿಸಿದರು. ಇದರಿಂದಾಗಿ ರಾಜ್ಯದ ಮೂಲೆ ಮೂಲೆಯಲ್ಲಿದ್ದ ರೈತರ ಜಾನುವಾರುಗಳಿಗೆ ತಕ್ಷಣಕ್ಕೆ ಉತ್ತಮ ಚಿಕಿತ್ಸೆ ಸಿಗುವಂತಾಗಿತ್ತು.
ಆದರೆ, ಈಗಿನ ಸರ್ಕಾರ ಅದೇ ಮಾದರಿಯನ್ನು ಅನುಸರಿಸದೇ ಅನಗತ್ಯವಾಗಿ ಲಿಖಿತ ಪರೀಕ್ಷೆಗಳನ್ನು ನಡೆಸಿ ಗೊಂದಲ ಸೃಷ್ಟಿಸಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
PublicNext
31/07/2026 03:57 pm
LOADING...