ಚಾಮರಾಜನಗರ : ಕಾವೇರಿ ನೀರು ನಿರ್ವಹಣಾ ಮಂಡಳಿಯು ತಮಿಳುನಾಡಿಗೆ 15 ದಿನಗಳ ಕಾಲ ದಿನಕ್ಕೆ 3500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘ ಮತ್ತು ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಹೆದ್ದಾರಿ ತಡೆದು ಪ್ರತಿಭಟನೆ ನಡಸಲಾಯಿತು.
ನಗರದಿಂದ ಸತ್ಯಮಂಗಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆ ನಡೆಸಿದ ರೈತರು ಸಿಡಬ್ಲ್ಯೂ ಆರ್‌ಸಿ ಆದೇಶವನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ 'ಹಾಕಿದರು.
ಸಿಡಬ್ಲ್ಯೂಆರ್‌ಸಿ ಸಮಿತಿಯ ಆದೇಶ ರಾಜ್ಯದ ಜನತೆಗೆ ದ್ರೋಹ ಮಾಡಿದೆ. ಬರದ ಹಿನ್ನೆಲ್ಲೆಯಲ್ಲಿ ಕಾವೇರಿ ಹಾಗೂ ಕಬಿನಿಯಲ್ಲಿ ನೀರಿಲ್ಲದೇ ಪರದಾಟ ನಡೆಸುವಂತಾಗಿದೆ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಹೆಚ್ಚೆತ್ತು ತಮಿಳುನಾಡು ಸರ್ಕಾರದ ಜತೆ ಮಾತುಕತೆ ನಡೆಸಬೇಕು. ಅಲ್ಲದೇ ಇಲ್ಲಿನ ಶಾಸಕರು ಹಾಗೂ ಸಂಸದರು ಸಹ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿನ ಪರಿಸ್ಥಿತಿಯನ್ನು ತಿಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Kshetra Samachara
31/07/2026 04:15 pm
LOADING...