ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಯುವಕನ ಬರ್ಬರ ಹತ್ಯೆ, ಕಲ್ಲಿನಿಂದ ತಲೆ ಜಜ್ಜಿ ಕೊಲೆ, ಹಳೆ ದ್ವೇಷ ಶಂಕೆ

ಚಿಕ್ಕಬಳ್ಳಾಪುರ : ನಗರದ ಶಾಂತಿನಗರದಲ್ಲಿ ತಡರಾತ್ರಿ ನಡೆದ ಭೀಕರ ಘಟನೆಯಲ್ಲಿ 27 ವರ್ಷದ ಯುವಕನನ್ನು ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮೃತನನ್ನು ನಗರದ ಪಿ.ಜಿ. ಟ್ಯಾಂಕ್ ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಪೈಂಟಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ತಲೆಗೆ ಭಾರೀ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಹಾಗೂ ಆರೋಪಿಗಳು ಯಾರು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ

Edited By :
PublicNext

PublicNext

01/08/2026 08:45 am

Cinque Terre

10.15 K

Cinque Terre

0

ಸಂಬಂಧಿತ ಸುದ್ದಿ