ಹಗರಿಬೊಮ್ಮನಹಳ್ಳಿ : ವಿಜಯನಗರ ಜಿಲ್ಲೆಯ ಮರಬ್ಬಿಹಾಳು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 2016ರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿಜಯನಗರ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಪಿಡಿಒ ವಸಂತರಾಜ್, ಗ್ರಾಮ ಪಂಚಾಯಿತಿ ಸದಸ್ಯ ಹನುಮಪ್ಪ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ ನಾಯ್ಕ ಅವರನ್ನು ದೋಷಿಗಳೆಂದು ಘೋಷಿಸಿರುವ ನ್ಯಾಯಾಲಯ, ತಲಾ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ತಲಾ 90 ಸಾವಿರ ದಂಡ ವಿಧಿಸಿದೆ.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪ ಸಾಬೀತಾಗಿದೆ. ಸರ್ಕಾರಿ ಸೇವೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ತೀರ್ಪು ನೀಡಿದೆ.
PublicNext
01/08/2026 11:45 am
LOADING...