ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಪ್ಪಳ: ಟಿಬಿ ಡ್ಯಾಂನಿಂದ ಕಾಲುವೆಗಳಿಗೆ ನೀರು ಬಿಡದಿದ್ರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ - ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ : ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ರೈತರನ್ನು ನಿರ್ಲಕ್ಷಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರು ತಮ್ಮ ಮಂತ್ರಿ ಮಂಡಲವನ್ನು ರಚಿಸಲು ವಾರಗಟ್ಟಲೆ ದೆಹಲಿಯಲ್ಲಿ ಕುಳಿತಿದ್ದಾರೆ ಅಂತ ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದ್ರು.

ಕೊಪ್ಪಳದಲ್ಲಿ ಮಾತಾಡಿದ ಅವರು, ಕಾಲುವೆಗಳಿಗೆ ನೀರು ಹರಿಸುವಂತೆ ಹೋರಾಟ ಮಾಡ್ತಿದ್ದೇವೆ. ಕೊಪ್ಪಳ ಜಿಲ್ಲೆಯ ಹಲವಾರು ರೈತರು ಬಿಜೆಪಿ ಪಕ್ಷದೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ. ಹೋರಾಟ ಮಾಡುವ ಮುನ್ನ ರೈತರಿಗೆ ನೀರು ಕೊಟ್ಟರೆ ಪ್ರತಿಭಟನೆ ಕೈಬಿಡುತ್ತೇವೆ. ನಾಲ್ಕು ಜಿಲ್ಲೆಗಳು ರೈತರ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿರುವುದನ್ನು ಮುಖ್ಯಮಂತ್ರಿಗಳು ಅರಿತುಕೊಳ್ಳಬೇಕು ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಮನವಿ ಮಾಡಿದರು.

Edited By :
PublicNext

PublicNext

01/08/2026 12:14 pm

Cinque Terre

11.93 K

Cinque Terre

0

ಸಂಬಂಧಿತ ಸುದ್ದಿ