ಹೊಸಪೇಟೆ : 80ನೇ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ, ಅತ್ಯಂತ ಸಡಗರ ಸಂಭ್ರಮದಿಂದ ಶಿಸ್ತುಬದ್ಧವಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಜುಲೈ 31) ರಾಷ್ಟ್ರದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ 15 ರಂದು ಬೆಳಿಗ್ಗೆ 7.30 ಕ್ಕೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು. ನಂತರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತದಿಂದ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ನಡೆಯಲಿದ್ದು, ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಸಮಾರಂಭಕ್ಕೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯಮಾನ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವೇದಿಕೆ ನಿರ್ಮಾಣ, ಅಲಂಕಾರ ಸಮರ್ಪಕ ಸಿದ್ಧತೆ ಕೈಗೊಳ್ಳಬೇಕು ಎಂದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎಲ್ಲಾ ಸರ್ಕಾರಿ ಕಟ್ಟಡಗಳಿಗೆ ಆಗಸ್ಟ್ 14 ಮತ್ತು 15ರಂದು ಸರ್ಕಾರಿ ಕಟ್ಟಡಗಳ ಮೇಲೆ ಹಾಗೂ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡಬೇಕು. ಕ್ರೀಡಾಂಗಣದ ಸುತ್ತಮುತ್ತ ನೈರ್ಮಲ್ಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ತುರ್ತು ಆರೋಗ್ಯ ಸೇವೆಗಾಗಿ ಆಂಬುಲೆನ್ಸ್ ಹಾಗೂ ವೈದ್ಯಕೀಯ ತಂಡವನ್ನು ಸ್ಥಳದಲ್ಲಿ ನಿಯೋಜಿಸಲು ಆರೋಗ್ಯ ಇಲಾಖೆಗೆ ತಿಳಿಸಿದರು.
PublicNext
01/08/2026 12:33 pm
LOADING...