ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮಿಳುನಾಡಿಗೆ ನೀರು ಬಿಡುಗಡೆ ಆದೇಶ ಖಂಡಿಸಿ ಪ್ರತಿಭಟನೆ

ಚಾಮರಾಜನಗರ : ತಮಿಳುನಾಡಿಗೆ ಕಾವೇ ರಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಿ ರುವ ಕಾವೇರಿ ನೀರು ನಿಯಂತ್ರಣ ಸಮಿತಿ ಯ ಕ್ರಮವನ್ನು ವಿರೋಧಿಸಿ ಜಿಲ್ಲಾ ರೈತ ಹಿತ ರಕ್ಷಣಾ ಹೋರಾಟ ಸಮಿತಿಯ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇಗು ಲದ ಎದುರು ಜಮಾಯಿಸಿದ ಪ್ರತಿಭಟನಾ ಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲ ಕಾಲ ಪ್ರತಿ ಭಟನೆ ನಡೆಸಿ ಸಿಡಬ್ಲ್ಯೂಆರ್ ಸಿ ಹಾಗೂ ತಮಿಳುನಾಡು ಸರ್ಕಾರದ ವಿರುದ್ದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಜಲಾ ಶಯಗಳಲ್ಲಿ ನೀರಿಲ್ಲದಂತಾಗಿದೆ. ಜಲಾಶಯದಲ್ಲಿರುವ ಅಲ್ಪಸ್ವಲ್ಪ ನೀರಿನಲ್ಲಿ ಕುಡಿಯುವ ನೀರು ಹಾಗೂ ರಾಜ್ಯದ ರೈತರ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕಿದೆ. ಈ ನಡುವೆ ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್ ಸಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡದೆ ನೀರು ಬಿಡದಂತೆ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾವೇರಿ ನೀರು ಬಿಡುಗಡೆ ತಡೆಯಲು ರಾಜ್ಯ ಸರ್ಕಾರ ಅಗತ್ಯ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳದಲ್ಲಿದ್ದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Edited By : PublicNext Desk
Kshetra Samachara

Kshetra Samachara

01/08/2026 03:33 pm

Cinque Terre

380

Cinque Terre

0

ಸಂಬಂಧಿತ ಸುದ್ದಿ