ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ವಿರೋಧಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು.
ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೇದಿಕೆಯ ಪದಾಧಿಕಾರಿಗಳು ಇದ್ದರು.
Kshetra Samachara
01/08/2026 03:38 pm
LOADING...