ಚಾಮರಾಜನಗರ : ಕಾವೇರಿ ನೀರು ನಿಯಂ ತ್ರಣ ಸಮಿತಿಯ ಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದ ಎದುರು ಜಮಾಯಿದ ಪ್ರತಿಭಟನಾಕಾರರು ಮಾನವ ಸರಪಳಿ ರಚಿಸಿ ಸಿಡಬ್ಲ್ಯೂಆರ್ ಸಿ ಹಾಗೂ ತಮಿಳುನಾಡು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಜಲಾ ಶಯಗಳಲ್ಲಿ ನೀರಿಲ್ಲದಂತಾಗಿದೆ. ಜಲಾಶಯ ದಲ್ಲಿರುವ ಅಲ್ಪಸ್ವಲ್ಪ ನೀರಿನಲ್ಲಿ ಕುಡಿಯುವ ನೀರು ಹಾಗೂ ರಾಜ್ಯದ ರೈತರ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕಿದೆ. ಈ ನಡುವೆ ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್ ಸಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡದೆ ನೀರು ಬಿಡದಂತೆ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Kshetra Samachara
01/08/2026 04:36 pm
LOADING...