ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಳೆಯ ಆರ್ಭಟ - ದತ್ತಪೀಠ ರಸ್ತೆಯಲ್ಲಿ ಭೂಕುಸಿತ, ಸಂಚಾರ ನಿರ್ಬಂಧಿಸದ ಜಿಲ್ಲಾಡಳಿತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯ ದತ್ತಪೀಠ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಕಾಂಕ್ರೀಟ್ ವಾಲ್ ನಿರ್ಮಾಣಗೊಳ್ಳುತ್ತಿದ್ದ ಸ್ಥಳದಲ್ಲೇ ಭೂಕುಸಿತ ಉಂಟಾಗಿದೆ.

ಕಳೆದ ಎರಡು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ತೇವಾಂಶ ಹೆಚ್ಚಾದ ಕಾರಣ ಮಣ್ಣು ಸಡಿಲಗೊಂಡು ಕುಸಿತ ಉಂಟಾಗಿದೆ. ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದರೂ ಜಿಲ್ಲಾಡಳಿತ ವಾಹನ ಸಂಚಾರ ನಿಷೇಧಿಸದಿರುವುದು ಮತ್ತಷ್ಟು ಅನಾಹುತಕ್ಕೆ ಕಾರಣವಾಗಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸ್ಥಳದಿಂದ ಚಿಕ್ಕಮಗಳೂರು ಪ್ರತಿನಿಧಿ ಡ್ಯಾನಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Edited By :
PublicNext

PublicNext

01/08/2026 05:40 pm

Cinque Terre

5.87 K

Cinque Terre

0

ಸಂಬಂಧಿತ ಸುದ್ದಿ