ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಮೊದಲ ಬಾರಿಗೆ ಈ ಮಳೆಗಾಲದಲ್ಲಿ ಸಂಪೂರ್ಣ ಭರ್ತಿಯಾಗಿದ್ದು, ಮಡಿಕೇರಿ–ಭಾಗಮಂಡಲ ಹಾಗೂ ನಾಪೋಕ್ಲು–ಭಾಗಮಂಡಲ ರಸ್ತೆಯ ಮೆಲ್ಸೇತುವೆ ಮೇಲೆ ಸುಮಾರು 3 ಅಡಿ ನೀರು ಹರಿಯುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಕಾವೇರಿ ನದಿಯ ನೀರಿನ ಮಟ್ಟ ವೇಗವಾಗಿ ಏರಿಕೆಯಾಗಿದೆ.
ಭಾಗಮಂಡಲದ ತ್ರಿವೇಣಿ ಸಂಗಮ ಈ ಮಳೆಗಾಲದಲ್ಲಿ ಮೊದಲ ಬಾರಿಗೆ ಸಂಪೂರ್ಣ ಭರ್ತಿಯಾಗಿದ್ದು, ಸಂಗಮದ ಸುತ್ತಮುತ್ತ ನೀರು ವ್ಯಾಪಿಸಿದೆ. ಮಡಿಕೇರಿ–ಭಾಗಮಂಡಲ ಹಾಗೂ ನಾಪೋಕ್ಲು–ಭಾಗಮಂಡಲ ರಸ್ತೆಯ ಮೆಲ್ಸೇತುವೆ ಮೇಲೆ ಸುಮಾರು 3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ಮೆಲ್ಸೇತುವೆ ಮೇಲೆ ವಾಹನ ಸವಾರರು ಹಾಗೂ ಸಾರ್ವಜನಿಕರು ತೆರಳುತ್ತಿದ್ದಾರೆ.
Kshetra Samachara
01/08/2026 05:56 pm
LOADING...